ಕಳೆದು ಹೋದ ಅವಳ ನೆನಪಲ್ಲಿ...
ಮತ್ತೆ ಮತ್ತೆ ಅವಳ ನೆನಪು.. ಅದು ಕಾಡುವ ನೆನಪು.. ಒಂದೊಮ್ಮೆ ಮರೆತು ಹೋದರೂ, ಕೆಲವೊಮ್ಮೆ ನೆನಪಾಗಲೇ ಬೇಕು.. ಅವಳಂಥವಳನ್ನು ಕಂಡಾಗಲಾದರೂ ನೆನಪಾಗಬೇಕು. ಅಂಥಾ ಒಂದು ಸ್ಥಿತಿಗೆ ನಾನು ಬಂದಿದ್ದೇನೆ. ಬೆಂಗಳೂರಿಗೆ ಬಂದ ಸಮಯದಲ್ಲಿ ಅವಳ ಬಗ್ಗೆ ಹಲವು ಕನಸು.. ಬೀದಿ ಬೀದಿಗಳಲ್ಲಿ ಅವಳ ಜೊತೆ ಓಡಾಡಬೇಕು. ವಾರದ ರಜೆ ದಿನ ಅವಳೇ ಎಲ್ಲ ಇತ್ಯಾದಿ. ನಿರೀಕ್ಷೆ ನಿಜವಾಗಲು ಹೆಚ್ಚು ದಿನವೇನೂ ಹಿಡಿಯಲಿಲ್ಲ. ಶಿವಾಜಿನಗರದ ಬೀದಿ ಬದಿಯಲ್ಲಿ ಸಾಗುತ್ತಿದ್ದವನಿಗೆ ನೀರಿಕ್ಷಿಸಿದವಳೇ ಸಿಕ್ಕಿದ್ದಳು. ಒಂದಲ್ಲ ನಾಲ್ಕಾರು ಬಾರಿ ಅಲೋಚನೆ. ಇವಳು ಆಗಬಹುದಾ ಎಂಬಂತೆ. ನಿನ್ನ ಸ್ಥಿತಿ ಗತಿಗೆ ಅವಳೇ ಆಗಬಹುದು ಮಾರಾಯಾ ಅಂತಾ ಗೆಳೆಯ ರಾಗ ತೆಗೆದಿದ್ದ. ಮುಂದಿನ ಒಂದು ಶುಭ ಸಂದರ್ಭದಲ್ಲಿ ಅವಳನ್ನು ಮನೆಗೆ ಕರೆದುಕೊಂಡು ಹೋಗಬೇಕು ಅದಕ್ಕಿಂತಲೂ ಮೊದಲು ಅವಳ ಬಗ್ಗೆ ಮನೆಯಲ್ಲಿ ಅಪ್ಪ-ಅಮ್ಮನಿಗೆ ಹೇಳಬೇಕು ಎಂದೆಲ್ಲ ಅಂದುಕೊಂಡಿದ್ದೆ ಹೇಳಿಯೂ ಇದ್ದೆ. ಮೊದಲಿಗೆ ಅಪ್ಪ ಬೇಡ ಎಂದರೂ ನನ್ನ ಮಾತಿಗೆ ಕಟ್ಟು ಬಿದ್ದು ನಿನಗೆ ಒಳ್ಳೆದಾಗುವುದಾದರೆ ಆಗಲಿ ಅಂದಿದ್ದರು. ಸರಿ. ಮತ್ತಿನ್ಯಾರನ್ನೂ ಕೇಳುವ ಸ್ಥಿತಿಯಲ್ಲಿ ನಾನಿರಲಿಲ್ಲ. ಗೆಳೆಯನನ್ನು ಕೂಡಿಕೊಂಡು ಅವಳನ್ನು ನೋಡಲೊಮ್ಮೆ ಹೋಗಿದ್ದೆ. ಮೊದಲೇ ಇಷ್ಟವಾದವಳು ಅಲ್ಲವೇ? ಮತ್ತೆ ತಡಮಾಡಲಿಲ್ಲ. ನನ್ನೊಂದಿಗೆ ಬರುತ್ತೀಯಾ ಎಂದು ಕೇಳಿದೆ. ಆಕೆಗೂ ಮನಸ್ಸಿತ್ತು. ಮಾರನೇ ದಿನ ಹೋದಾಗ ಬಾಗಿಲಲ್ಲೇ ನಿಂತಿದ್ದಳು. ನಾನು ಅಪಾರ ಖುಷಿಯಿಂದ ಅವಳನ್ನು ಕರೆದುಕೊಂಡು ಬಂದೆ.
ನಿಜವಾದ ಕಥೆ ಶುರುವಾಗುವುದೇ ಇನ್ನು, ಅವಳು ಬಂದ ಮೇಲಿನ ಸಂಭ್ರಮ ಹೇಳಬೇಕೆ. ಸಣ್ಣ ಮಕ್ಕಳಿಗೆ ಪ್ರೀತಿಯ ವಸ್ತುಕೊಟ್ಟರೆ ಆಗುವಷ್ಟೇ ಸಂತಸ ನನಗಾಗಿತ್ತು. ದಿನವೂ ಅವಳೊದಂದಿಗೆ ಸಂಭ್ರಮಿಸುವುದೇನು, ಕನ್ನಿಂಗ್ಹ್ಯಾಮ್ ರಸ್ತೆಯಿಂದ ಪ್ಯಾಲೇಸ್ ರೋಡ್ನವರೆಗೆ, ಕಬ್ಬನ್ ಪಾರ್ಕ್, ಕಮರ್ಷಿಯಲ್ ಸ್ಟ್ರೀಟ್ಗಳಲ್ಲಿ ಕೈಕೈ ಹಿಡಿದು ಅಡ್ಡಾಡಿದ್ದೇನು ಒಂದಾ ಎರಡಾ. ಆಫೀಸ್ಗೂ ಅವಳ ಜೊತೆಯೇ ಹೋಗುವುದೆಂದು ಬಳಿಕ ನಿರ್ಧಾರ ಮಾಡಿಕೊಂಡೆ. ಹೋಗುವುದು ಬರುವುದು ಜೊತೆಯಲ್ಲೇ. ದಿನಕಳೆದದ್ದೇ ಗೊತ್ತಾಗಲಿಲ್ಲ. ನಾನು ಇವಳ ಜೊತೆ ಬರುವುದೆಂದು ಆಫೀಸ್ನಲ್ಲಿ ಕೆಲವರಿಗೆ ತೀವ್ರ ಕುತೂಹಲ ಹುಟ್ಟಿತ್ತು. ಸೆಕ್ಯುರಿಟಿ ಗಾರ್ಡ್ ನಿಂದ ಹಿಡಿದು, ಬಾಸ್.. ಎಲ್ಲರೂ ನನ್ನನ್ನು ನೋಡುವವರೇ. ಕೆಲವರು ಮನಸ್ಸು ತಡೆಯಲಾರದೆ ಕೇಳಿಬಿಟ್ಟಿದ್ದರು. ಹೇಗಿದೆ ಲೈಫು ಎಂಬತೆ. ಇನ್ನು ಕೆಲವರು ನನ್ನದೇ ಮನಸ್ಥಿತಿಯವರು ಇಂಥವಳು ನಮಗೂ ಸಿಕ್ಕಿದ್ದರೆ ಚೆನ್ನಾಗಿತ್ತು ಎಂದೂ ಹೇಳಿದ್ದರು. ಅಷ್ಟರ ಮಟ್ಟಿಗೆ ನಾನು ಅದೃಷ್ಟವಂತ.
ಹೀಗೆ ದಿನಗಳು ಉರುಳುತ್ತಿದ್ದಂತೆ, ಸಂತೋಷವೂ ಹಾಗೇ ಇರಬೇಕೆಂದೇನಿಲ್ಲವಲ್ಲ.. ಅಷ್ಟಕ್ಕೂ ಆ ಘಟನೆ ನಡೆದೇ ಹೋಗಬಹುದೆಂಬ ಅನುಮಾನವೂ ನನಗಿರಲಿಲ್ಲ. ನಾನಿದ್ದ ಮನೆ, ನೆರೆಕರೆಯವರಿಗೂ ಇವಳು ಇಷ್ಟವಾಗಿದ್ದಳು. ನಾನು ಇವಳೊಂದಿಗೆ ಹೋಗುವಾಗ ಬರುವಾಗ ಎಲ್ಲರೂ ತದೇಕ ಚಿತ್ತದಿಂದ ನನ್ನನ್ನೇ ನೋಡುತ್ತಿದ್ದರು. ನಾನೂ ಒಳಗೊಳಗೇ ಸಂಭ್ರಮಿಸುತ್ತಿದ್ದೆ. ನನ್ನ ಗೆಳೆಯರಂತೂ ನನಗಿಂತಲೂ ನನ್ನ ಖುಷಿಯ ಮನಸ್ಥಿಗೆ ಸಂಭ್ರಮಪಟ್ಟಿದ್ದರು. ಆದರೆ...
ಆ ದಿನ ಬಂದೇ ಬಿಟ್ಟಿತು. ಅಂದು ನಾನು ಅವಳೊಂದಿಗೆ ಆಫೀಸಿಗೆ ಹೋಗೇ ಇರಲಿಲ್ಲ. ಬೆಳಗ್ಗೆ ಎಲ್ಲೋ ಸುತ್ತಾಡಿ, ಅಲ್ಲಿಂದಲೇ ಆಫೀಸಿಗೆ ಹೋಗಿದ್ದೆ. ಅವಳು ಮನೆಯಲ್ಲಿದ್ದಳು. ಹೋಗುವಾಗ ನನಗೆ ಕಂಪನಿಯಿಲ್ಲ ಎಂದು ಅನಿಸುತ್ತಿತ್ತು. ಇಂದು ಒಂದೇ ದಿನ ಮಾತ್ರ ಹೀಗೆ ನಾಳೆಯಿಂದ ಅವಳ ಕಂಪನಿ ಇದ್ದೇ ಇದೆಯಲ್ಲ ಅಂದುಕೊಂಡಿದ್ದೆ.
ಅಂದು ನನಗೆ ಮಧ್ಯಾಹ್ನ ಮೇಲೆ ಕೆಲಸ. ಮಧ್ಯಾಹ್ನ ಎರಡೂವರೆ ಹೊತ್ತಿಗೆ ಆಫೀಸಿಗೆ ತಲುಪಿ, ರಾತ್ರಿ ಹನ್ನೆರಡು ಗಂಟೆ ಪರ್ಯಂತ ನಿರಂತರ ದುಡಿಮೆ ಮಾಡಿ ಮನೆಗೆ ಹೊರಟಿದ್ದೆ. ಆಫೀಸ್ನ ಮೆಟ್ಟಿಲಿಳಿಯುತ್ತಿರುವಾಗಲೊಮ್ಮೆ ಮತ್ತೆ ಅವಳ ನೆನಪು. ಛೇ ಇವತ್ತಿಲ್ಲ ಅವಳು ಎಂಬಂತೆ. ಸರಿ ಬೀದಿ ದೀಪದ ಬೆಳಕಿನಲ್ಲೇ ಅವರಳನ್ನು ನೋಡುವ ನೆವದಲ್ಲಿ ಅವಸರವಸರವಾಗಿ ನಡೆದುಕೊಂಡು ಹೋಗಿದ್ದೆ. ಇನ್ನೇನು ಮನೆ ತಲುಪಲಿದೆ ಅನ್ನುವಷ್ಟರಲ್ಲಿ ಮನಸ್ಸು ಭಾರವಾಗಿತ್ತು.. ಏನೋ ಆಗಬಾರದ್ದು ಆಗಿದೆ ಎಂಬಂತೆ. ಹಾಗಾದಿರಲಪ್ಪಾ, ಅವಳು ಚೆನ್ನಾಗಿರಲಿ ಅಂತ ಮನದಲ್ಲೇ ಅಂದುಕೊಂಡಿದ್ದೆ. ಕೆಲವೊಮ್ಮೆ ಗ್ರಹಿಸಿದ್ದು ನಿಜವಾಗುತ್ತದಂತೆ.. ಇಲ್ಲೂ ಹಾಗೇ ಆಯಿತು. ನನ್ನ ಕನಸು ಚೂರು ಚೂರಾಗಿತ್ತು. ಅವಳು ಮನೆಯಲ್ಲಿ ಇರಲೇ ಇಲ್ಲ. ಒಮ್ಮೆ ಕುತೂಹಲ, ಹೊರಗಡೆ ಹೋಗಿರಬಹುದಾ ಎಂಬಂತೆ. ಅಲ್ಲೇ ಮಲಗಿದ್ದ ಸ್ನೇಹಿತನನ್ನು ಕೇಳಿದೆ. ಅವಳೆಲ್ಲಿದ್ದಾಳೆ ಎಂದು ‘ಗೊತ್ತಿಲ್ಲ.. ಇರಬಹುದು ಇಲ್ಲೇ’ ಎಂದು ಮುಸುಕೆಳೆದು ಮಲಗಿಕೊಂಡ. ನನಗೆ ಕ್ಷಣ ಕ್ಷಣ ಕಷ್ಟವಾಗುತ್ತಿತ್ತು. ಹಾಗಾದರೆ ಈ ರಾತ್ರಿ 1 ಗಂಟೆ ಸುಮಾರಿಗೆ ಎಲ್ಲಿಗೆ ಹೋಗಿರಬಹುದು ಎಂಬ ಪ್ರಶ್ನೆಯೊಂದಿಗೆ ಹುಡುಕಲು ಶುರುಮಾಡಿದೆ. ಎಲ್ಲೂ ಇಲ್ಲ ಮನೆಯ ಹಿಂಭಾಗ ಆ ವಠಾರದ ಸಂದು ಗೊಂದಿಗಳಲ್ಲೆಲ್ಲೂ ಇಲ್ಲ.. ಬಿಟ್ಟು ಹೋದ್ದಕ್ಕೆ ಆಗಬಾರದ್ದು ಆಯಿತಲ್ಲಾ ಎಂಬ ದುಃಖ ಉಮ್ಮಳಿಸಿ ಬರುತ್ತಿತ್ತು. ಉಪಾಯ ಕಾಣದೆ ಅವಳ ನೆನಪಲ್ಲಿ ಕದ ಹಾಕಿ ಮಲಗಿದೆ. ನಿದ್ದೆಯೂ ಇಲ್ಲ. ಬೆಳಗ್ಗೆ ಎದ್ದು ಇನ್ನೊಂದು ರೌಂಡ್ ಹುಡುಕುವ ಮನಸ್ಸಾಯಿತು. ಎಲ್ಲಿ ನೋಡಿದರೂ ಅವಳ ಪತ್ತೆಯಿಲ್ಲ. ಹತ್ತಿರದ ಮನೆಯವರಿಗೆ ಆಶ್ಚರ್ಯ, ಬೇಸರ. ಕೆಲವರು ನೋಡಿದ್ರೆ ಹೇಳ್ತೀವಪ್ಪಾ.. ಅಂದರು. ನನ್ನ ಕಷ್ಟ ಗೆಳೆಯರಿಗೂ ಹೇಳಿಕೊಂಡೆ ಆದರೆ ಪ್ರಯೋಜನವಾಗಲಿಲ್ಲ. ನಾಲ್ಕಾರು ತಿಂಗಳಿಂದ ಒಟ್ಟಿಗಿದ್ದವಳು ಒಂದು ಹೊತ್ತಿನಲ್ಲಿ ನನ್ನ ಬಿಟ್ಟೇ ಹೋಗಿದ್ದಳು. ಮತ್ತೆ ಏಕಾಂಗಿ ಬದುಕಿಗೆ ಮರಳಿದ್ದೆ.
ಅಲ್ಲಿಂದ ಬಳಿಕ ನನಗೆ ಕೆಲವೊಮ್ಮೆ ಅವಳ ನೆನಪು ಕಾಡುತ್ತದೆ. ಅವಳು ಅವಳೇ ಅಲ್ಲವೇ.? ಬೇರೆಯವರು ಆ ಜಾಗ ತುಂಬುವುದು ಕಷ್ಟ. ಭಾವನಾತ್ಮಕ ವಿಷಯ ಅದು. ಮೊನ್ನೆ ಮೊನ್ನೆ ಗೆಳತಿಯ ಮನೆಗೆ ಹೋಗಿದ್ದವನಿಗೆ ಅವಳಂತೇ ಒಬ್ಬಳು ಕಂಡಿದ್ದಳು. ಅಷ್ಟಕ್ಕೆ ಇಷ್ಟೆಲ್ಲ ಹೇಳಬೇಕಾಯಿತು. ಅದು ನನ್ನ ಪ್ರೀತಿ ಪಾತ್ರದ ಸೈಕಲ್. ಚೈನಿನಲ್ಲಿ ಬಿಗಿದಿದ್ದರೂ ದೊಡ್ಡ ಬೀಗ ಕತ್ತರಿಸಿ ಲಪಟಾಯಿಸಿದ್ದರು. ಖದೀಮರ ಐದೋ ನಾಲ್ಕೋ ಸಾವಿರದ ಆಸೆಗೆ ನನ್ನ ಕನಸು ಹಾಗೇ ತೊಳೆದು ಹೋಗಿತ್ತು.

5 ಕಾಮೆಂಟ್‌ಗಳು:
Oh I thought about ur Bullet....
@ Ramakrishna,
ಪುಣ್ಯಕ್ಕೆ ಅದೊಂದು ಇದ್ದು ಮಾರಾಯ...!!
ಚೆನ್ನಾಗಿ ಬರೆದಿದ್ದೀರಿ... ಬರೆಯುತ್ತಿರಿ..
super!!
enta bhava monne monne kelida yaraddo story idda hange iddalada ?!! ;)
Ishwar Tumba Rasikate yinda Nimma Pritiya Cycle na bagge Barediddira. Neevu endadru Hudugiyannu pritisiddare :P(athava pritisidare) khandita vagiyoo avalondigoo kooda neevu atu roads tirugadlikkilla...astondu cycle jatege tirugadiddira andkobahudu :P
Eegina kaaladalli neevu helidaage nammanne kadiyovantha(Kidnap etc) situations irovaaga Cycle kadiyodralli enu maha ide antane helbodu...
Olledaagi Lekhana barediddira ..Aduu kooda tumba samayada nantara..Innu hecchu olleya lekhana galannu Bareyiri anta Ashisuttene :)
ಕಾಮೆಂಟ್ ಪೋಸ್ಟ್ ಮಾಡಿ